ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್
Update: 2018-11-04 23:32 IST
ಮಂಡ್ಯ, ನ.4: ಲೋಕಸಭಾ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಕಣದಿಂದ ಹಿಂದೆ ಸರಿಯಲಿದ್ದಾರೆಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಡಾ.ಸಿದ್ದರಾಮಯ್ಯ ಗೋಪಾಲಕೃಷ್ಣ ಅವರ ವಿರುದ್ಧ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರಿಗೆ ದೂರು ನೀಡಿದ್ದು, ಪೊಲೀಸ್ ಇಲಾಖೆಗೆ ದೂರನ್ನು ರವಾನೆ ಮಾಡಲಾಗಿತ್ತು. ನಗರದ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆ ಪೊಲೀಸರು ಎಫ್‍ಐಆರ್ ದಾಖಲು ಮಾಡಿದ್ದಾರೆ.