ಎಂಆರ್‌ಪಿಎಲ್‌ನಿಂದ ಮತ್ತೆ ಭೂಸ್ವಾಧೀನವನ್ನು ವಿರೋಧಿಸಿ ಪ್ರತಿಭಟನೆ

Update: 2018-11-05 08:48 GMT

ಮಂಗಳೂರು, ನ.5: ಎಂಆರ್‌ಪಿಎಲ್ ತನ್ನ ಉತ್ಪಾದನಾ ಸಾಮರ್ಥ್ಯದ ಹೆಚ್ಚಳಕ್ಕಾಗಿ ಮತ್ತೆ ನೂರಾರು ಎಕರೆ ಜಮೀನನ್ನು ಸ್ವಾಧೀನಪಡಿಸಲು ಮುಂದಾಗಿರುವುದನ್ನು ಖಂಡಿಸಿ ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿಯು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿತು.

ಎಂಆರ್‌ಪಿಎಲ್ ಸಂಸ್ಥೆಯು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಗಳ ಮೂಲಕ ಸುಮಾರು 1,011 ಜಮೀನನ್ನು ಮತ್ತೆ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುದು ಖಂಡನೀಯ ಎಂದು ಪ್ರತಿಭಟನಾಕಾರರರು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು. ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆಯ ವಕ್ತಾರ ಟಿ.ಆರ್.ಭಟ್, ವಿದ್ಯಾ ದಿನಕರ್, ಕೃಷಿ ಭೂಮಿ ಸಂರಕ್ಷಣಾ ಸಮಿತಿಯ ಉಪಾಧ್ಯಕ್ಷ ವಿಲಿಯಂ, ಕಾರ್ಯದರ್ಶಿ ಲಾರೆನ್ಸ್, ಆಟೊರಿಕ್ಷಾ ಚಾಲಕ-ಮಾಲಕರ ಸಂಘದ ಪ್ರಕಾಶ್ ವಿ.ಎನ್., ಶಬೀರ್ ಮೊದಲಾದವರು ಭಾಗವಹಿಸಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News