ಸಾರಿಗೆ ಸಂಸ್ಥೆಗೆ ಅವಾರ್ಡ್ ಆಫ್ ಎಕ್ಸೆಲೆನ್ಸ್ ಪ್ರಶಸ್ತಿಯ ಗರಿ
ಬೆಂಗಳೂರು, ನ. 5: ಕೇಂದ್ರ ಸರಕಾರವು ನೀಡುತ್ತಿರುವ 2018ನೇ ಸಾಲಿನ ಅವಾರ್ಡ್ ಆಫ್ ಎಕ್ಸೆಲೆನ್ಸ್ ಪ್ರಶಸ್ತಿಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಲಭಿಸಿದ್ದು, ಸಂಸ್ಥೆಯ ಘನತೆ ಮತ್ತು ಹೊಣೆಗಾರಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ.
ನ.4ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ವಾರ್ಷಿಕ ಅರ್ಬನ್ ಮೊಬಿಲಿಟಿ ಇಂಡಿಯಾ ಸಮ್ಮೇಳನ ಮತ್ತು ಪ್ರದರ್ಶನ ಸಮಾರಂಭದಲ್ಲಿ ಮಹಾರಾಷ್ಟ್ರದ ಇಂಧನ ಸಚಿವರು ಪ್ರಶಸ್ತಿ ಪ್ರದಾನ ಮಾಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪೊನ್ನುರಾಜ್ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಪ್ರಶಸ್ತಿ ಬರಲು ಸಮಸ್ತ ಸಿಬ್ಬಂದಿ ಮತ್ತು ಅಧಿಕಾರಿ ವರ್ಗದವರ ಕಠಿಣ ಪರಿಶ್ರಮ, ಕರ್ತವ್ಯ ನಿಷ್ಠೆ ಬಹುಮುಖ್ಯವಾಗಿದ್ದು. ಮುಂದಿನ ದಿನಗಳಲ್ಲಿ ಪ್ರಯಾಣಿಕರಿಗೆ ಇನ್ನೂ ಉತ್ತಮ ಹಾಗೂ ಹೆಚ್ಚಿನ ಸುರಕ್ಷಿತ ಸಾರಿಗೆ ಸೇವೆ ಒದಗಿಸಲು ಬದ್ಧರಾಗಿರುತ್ತೇವೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.