ಮಂಡ್ಯ: ಬೈಕ್ ಢಿಕ್ಕಿ; ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

Update: 2018-11-05 15:22 GMT

ಮಂಡ್ಯ, ನ.5: ಬೈಕ್ ಢಿಕ್ಕಿ ಹೊಡೆದು ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಾಣಸಮುದ್ರದ ಗಾಮೆರ್ಂಟ್ಸ್ ಕಾರ್ಖಾನೆ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ಸಿದ್ದೇಗೌಡರ ಪತ್ನಿ ಸಣ್ಣಮ್ಮ(58) ಎಂಬುವರು ಸಾವನ್ನಪ್ಪಿದವರು. ಇವರು ರಸ್ತೆ ದಾಟುತ್ತಿದ್ದಾಗ ಹಲಗೂರಿನ ಕಡೆಯಿಂದ ಮಳವಳ್ಳಿ ಕಡೆಗೆ ಹೋಗುತ್ತಿದ್ದ ಪಲ್ಸರ್ ಬೈಕ್ ಢಿಕ್ಕಿ ಹೊಡೆದಿದೆ.

ತಕ್ಷಣ ಸಣ್ಣಮ್ಮನನ್ನು ಮಂಡ್ಯದ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೈಕ್ ಸವಾರ ಆನಂದ್‍ಗೂ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಹಲಗೂರು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News