ಹಲ್ಲೆ ಪ್ರಕರಣ: ಚೈತಾ ಕುಂದಾಪುರ ಸಹಿತ 7 ಮಂದಿಗೆ ಜಾಮೀನು
ಪುತ್ತೂರು, ನ. 5: ಸುಬ್ರಹ್ಮಣ್ಯದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರ ಕುಂದಾಪುರ ಸಹಿತ 7 ಮಂದಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ.
ಗುರುಪ್ರಸಾದ್ ಪಂಜ ಅವರಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಚೈತ್ರಾ ಕುಂದಾಪುರ ಹಾಗೂ ಸುದಿನ, ವಿನಯ್, ಮಣಿಕಂಠ, ನಿಖಿಲ್, ಹರೀಶ್ ಯಾನೆ ಶ್ರೀಕಾಂತ್, ಹರೀಶ್ ಖಾರ್ವಿ ಅವರಿಗೆ ಜಾಮೀನು ನೀಡಿದೆ.
ತಂಡದ ಪರವಾಗಿ ನ್ಯಾಯವಾದಿ ಮಹೇಶ್ ಕಜೆ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.
ನ. 2ರಂದು ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕರು ಆಕ್ಷೇಪ ವ್ಯಕ್ತ ಪಡಿಸಿದ್ದರು. ವಾದವನ್ನು ಆಲಿಸಿದ ನ್ಯಾಯಾಧೀಶರು ಸೋಮವಾರಕ್ಕೆ ಜಾಮೀನು ಅರ್ಜಿಯ ತೀರ್ಪನ್ನು ಮುಂದೂಡಿದ್ದರು. ಸೋಮವಾರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ.