ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ: ಮುಖ್ಯಮಂತ್ರಿಗೆ ಕೋಟ ಪತ್ರ
Update: 2018-11-05 21:42 IST
ಉಡುಪಿ, ನ.5: ಇತಿಹಾಸದುದ್ದಕ್ಕೂ ಮನುಕುಲದ ಮೇಲೆ ದೌರ್ಜನ್ಯ ನಡೆಸಿದ ಟಿಪ್ಪುವನ್ನು ಕರ್ನಾಟಕ ಸರಕಾರ ವೈಭವಿಕರಿಸುತ್ತಿರುವುದು ದುರದೃಷ್ಟಕರ. ಇತಿಹಾಸದಲ್ಲಿ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆಯಾಗಿ ಆಡಳಿತ ನಡೆಸಿ, ಕನ್ನಡ ವಿರೋಧಿ ಎನಿಸಿದ ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾಗಿರುವ ರಾಜ್ಯ ಸರಕಾರದ ಕ್ರಮವನ್ನು ವಿಧಾನಪರಿಷತ್‌ನಲ್ಲಿ ವಿಪಕ್ಷದ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.
ಈ ಮೂಲಕ ಸರಕಾರ, ರಾಜ್ಯದಲ್ಲಿ ಶಾಂತಿಭಂಗಕ್ಕೆ ಪ್ರಯತ್ನಿಸುತ್ತಿದೆ ಎಂದವರು ಮುಖ್ಯಮಂತ್ರಿ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ತನ್ನ ಹೆಸರನ್ನು ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಬಾರದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಟಿಪ್ಪು ಜಯಂತಿಯನ್ನು ರದ್ದು ಪಡಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.