×
Ad

ಭ್ರಷ್ಟಾಚಾರ ಜಾಗೃತಿ ಅರಿವು ಸಪ್ತಾಹ

Update: 2018-11-05 21:50 IST

ಉಡುಪಿ, ನ.5: ಉಡುಪಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದಿಂದ ಅ.29 ರಿಂದ ನ.3ರವರೆಗೆ ಭ್ರಷ್ಟಾಚಾರ ಜಾಗೃತಿ ಅರಿವು ಸಪ್ತಾಹವನ್ನು ಹಮ್ಮಿಕೊಳ್ಳಲಾ ಗಿತ್ತು. ಈ ಪ್ರಯುಕ್ತ ಜಿಲ್ಲೆಯ ವಿವಿಧ ಶಾಲಾ, ಕಾಲೇಜು, ಸಂಘ ಸಂಸ್ಥೆಗಳ ಸಹಬಾಗಿತ್ವದಲ್ಲಿ ವಿವಿಧ ಕಾರ್ಯಕ್ರಮಗಳು, ಭಾಷಣ ಸ್ಪರ್ಧೆ, ಜಾಥಾ ಗಳನ್ನು ನಡೆಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಶನಿವಾರ ಭ್ರಷ್ಟಾಚಾರ ಜಾಗೃತಿ ಅರಿವು ಸಪ್ತಾಹದ ಸಮಾರೋಪ ಸಮಾರಂಭ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮಾರಂದಲ್ಲಿ ಬೋರ್ಡ್ ಹೈಸ್ಕೂಲ್‌ನ ಪ್ರಾಂಶುಪಾಲ ವಿಲಾಸ್ ಕುಮಾರ್, ಉಪನ್ಯಾಸಕ ಪರಶುರಾಮ್, ಸಮಾಜ ಸೇವಕ ನಿತ್ಯನಂದ ಒಳಕಾಡು, ಭ್ರಷ್ಟಾಚಾರ ನಿಗ್ರಹ ಪೊಲೀಸ್ ಠಾಣಾ ನಿರೀಕ್ಷಕ ಜಯರಾಮ ಡಿ. ಗೌಡ, ಬಿ.ಎಸ್.ಸತೀಶ್ ಹಾಗೂ ಇತರರು ಭಾಗವಹಿಸಿದ್ದರು ಎಂದು ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News