×
Ad

ಟಿಪ್ಪು ಜಯಂತಿ ಪೂರ್ವಭಾವಿ ಸಭೆ: ಅರ್ಥಪೂರ್ಣ ಟಿಪ್ಪು ಜಯಂತಿ ಆಚರಣೆಗೆ ಡಿಸಿ ಸೂಚನೆ

Update: 2018-11-05 22:33 IST

ಮಂಗಳೂರು, ನ.5: ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ದ.ಕ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲು ಸರ್ವ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜರುಗಿದ ಟಿಪ್ಪು ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ನ.10ರಂದು ಪೂರ್ವಾಹ್ನ 10:30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಉಪನ್ಯಾಸಕರ ಆಯ್ಕೆ ವೇದಿಕೆ, ವೇದಿಕೆ ಅಲಂಕಾರಕ್ಕೆ ಸೂಚನೆಯನ್ನು ನೀಡಲಾಯಿತು. ಆಚರಣೆಯಲ್ಲಿ ಉಪನ್ಯಾಸಗಳು ಕೇಳುಗರಲ್ಲಿ ಜ್ಞಾನ ವೃದ್ಧಿಸುವಂತದುದಾಗಿರಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಸೆಲ್ವಮಣಿ, ಪೊಲೀಸ್ ಕಮಿಷನರ್ ಸುರೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ, ಅಪರ ಜಿಲ್ಲಾಧಿಕಾರಿ ಕುಮಾರ್, ಮೂಡಾ ಕಮಿಷನರ್ ಶ್ರೀಕಾಂತ್ ರಾವ್ ಕೆ., ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಬಿ., ಸಮುದಾಯದ ಗಣ್ಯರು, ವಿವಿಧ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News