×
Ad

ಬಳ್ಳಾರಿ ಬಿಜೆಪಿ ಭದ್ರ ಕೋಟೆ ಏನಾಯಿತು ?: ಎಚ್.ಡಿ. ದೇವೇಗೌಡ

Update: 2018-11-06 15:00 IST

ಬೆಂಗಳೂರು, ನ.6: ಬಳ್ಳಾರಿ ಬಿಜೆಪಿಯ ಭದ್ರಕೋಟೆ ಎನ್ನುತ್ತಿದ್ದರು. ಇದೀಗ ಏನಾಯಿತು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ಪದ್ಮನಾಭನಗರದ ನಿವಾಸದಲ್ಲಿ  ಉಪ ಚುನಾವಣೆ ಫಲಿತಾಂಶ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ನ ಎಲ್ಲ ಕಾರ್ಯಕರ್ತರು ಮತ್ತು ಮುಖಂಡರು ಒಟ್ಟಾಗಿ ಕೆಲಸ ಮಾಡಿದ ಕಾರಣ 4 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇವೆ. ಇದರ ಜತೆಗೆ ಮತದಾರರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಶಿವಮೊಗ್ಗ ದಲ್ಲಿ ಅಭ್ಯರ್ಥಿ ಹಾಕಿದ್ದು ಕಡೇ ಗಳಿಕೆಯಲ್ಲಿ. ಸ್ವಲ್ಪ ಮೊದಲೇ ಹಾಕಿದ್ದರೆ ಗೆಲ್ಲುವ ಅವಕಾಶ ಇತ್ತು. 50 ಸಾವಿರ ಮತಗಳ ಅಂತರದಿಂದ ಅಲ್ಲಿ ಸೋತಿರುವುದನ್ನು ಒಪ್ಪುತ್ತೇನೆ ಎಂದು ನುಡಿದರು.

ಹಳೇ ಭಿನ್ನಾಭಿಪ್ರಾಯ ಮರೆತು ಒಟ್ಟಾಗಿ ಕೆಲಸ ಮಾಡ್ತೀವಿ. ಮುಂದಿನ ಲೋಕಸಭೆ ಸಹ ಕಾಂಗ್ರೆಸ್ ಜತೆ ಚುನಾವಣೆ ಎದುರಿಸುತ್ತೇವೆ. ರಾಹುಲ್ ಗಾಂಧಿ ಸೇರಿದಂತೆ ಸ್ಥಳೀಯ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಅಂತಿಮ ಮಾಡುತ್ತೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News