×
Ad

ಮೈತ್ರಿಯ ಉತ್ತಮ ಆಡಳಿತಕ್ಕೆ ಒಳ್ಳೆಯ ಫಲಿತಾಂಶ: ಸಚಿವ ಎಚ್.ಡಿ.ರೇವಣ್ಣ

Update: 2018-11-06 18:21 IST

ಬೆಂಗಳೂರು, ನ.6: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಒಳ್ಳೆಯ ಆಡಳಿತದಿಂದಾಗಿ ಒಳ್ಳೆಯ ಫಲಿತಾಂಶ ಹೊರಬಂದಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ  ಇಂದಿಲ್ಲಿ ತಿಳಿಸಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್‌ಗೆ ಗೆಲುವಿಗೆ ಸಂಬಂಧಪಟ್ಟಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಆಡಳಿತ ವಹಿಸಿಕೊಂಡ ನಂತರ ಮಾಡಿದ ರೈತರ ಸಾಲ ಮನ್ನಾ ಫಲವಾಗಿ ಈ ಉಪ ಚುನಾವಣೆಯಲ್ಲಿ ಮತದಾರರು ಆಶೀರ್ವದಿಸಿದ್ದಾರೆ ಎಂದರು.

ಇದನ್ನು ನೋಡಿಯಾದರೂ ಕೇಂದ್ರದಲ್ಲಿರುವ ಬಿಜೆಪಿ ಸರಕಾರ ಎಚ್ಚೆತ್ತುಕೊಂಡು ಜನಪರ ಕೆಲಸ ಮಾಡಬೇಕಿದೆ. ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಜನತೆಗೆ ಧನ್ಯವಾದ ಸಲ್ಲಿಸಿದ ಅವರು, ಶಿವಮೊಗ್ಗ ಕ್ಷೇತ್ರದಲ್ಲಿ ಹಣ ಬಲ ಕೆಲಸ ಮಾಡಿದಂತೆ ಕಾಣಿಸುತ್ತಿದೆ. ಬಳ್ಳಾರಿಯಲ್ಲಿನ ಫಲಿತಾಂಶ ಉತ್ತಮ ಎನಿಸಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News