×
Ad

ನ.9: ವಿದ್ಯಾರ್ಥಿ ವೇತನ, ಸರಕಾರ ಸೌಲಭ್ಯಗಳ ಮಾಹಿತಿ ಪುಸ್ತಕ ಬಿಡುಗಡೆ

Update: 2018-11-07 17:39 IST

ಮಂಗಳೂರು, ನ.7: ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನ, ಸರಕಾರ ಮತ್ತಿತರ ಸಂಘ ಸಂಸ್ಥೆಗಳ ಸೌಲಭ್ಯಗಳ ಬಗ್ಗೆ ಯೂಸ್ು ವಕ್ತಾರ್ ಉಳ್ಳಾಲ್ ರಚಿಸಿರುವ ‘ಬ್ಯಾಕ್‌ವಾರ್ಡ್ ಕ್ಲಾಸಸ್ ಆ್ಯಂಡ್ ಮೈನಾರಿಟಿ ಸ್ಕಾಲರ್‌ಶಿಪ್ ಓಟ್‌ಲೈನ್ಸ್’ ಮಾಹಿತಿ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನ.9ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದ ಕಂದಾಯ ಭವನದಲ್ಲಿ ನಡೆಯಲಿದೆ ಎಂದು ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಹುಸೈನ್ ಜೋಕಟ್ಟೆ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪುಸ್ತಕ ಬಿಡುಗಡೆ ಮಾಡಲಿದ್ದು, ದ.ಕ. ಜಿಲ್ಲಾ ಅಹಿಂದ ಚಳವಳಿ ಅಧ್ಯಕ್ಷ ನವೀನ್‌ಚಂದ್ರ ಡಿ. ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿವಿ ಕುಲಸಚಿವ ಪ್ರೊ.ಎ.ಎಂ.ಖಾನ್, ಡಿಸಿಪಿ ಹನುಮಂತರಾಯ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ್ ಭಂಡಾರಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಉಸ್ಮಾನ್, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕರ್ ಅವರನ್ನು ಸನ್ಮಾನಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಜನ ಚಳವಳಿ ಅಧ್ಯಕ್ಷ ವಾಸುದೇವ ಬೋಳೂರು, ಕಾರ್ಯದರ್ಶಿ ಯೂಸ್ು ವಕ್ತಾರ್, ವಲೇರಿಯನ್ ಲೋಬೊ, ಅಬೂಬಕರ್ ಪಲ್ಲಮಜಲು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News