ವಕೀಲರ ವಾಹನಗಳಿಗೆ ಟೋಲ್ ವಿನಾಯಿತಿ ನೀಡಿ: ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

Update: 2018-11-07 16:07 GMT

ಬೆಂಗಳೂರು, ನ.7: ರಾಷ್ಟ್ರೀಯ ಹೆದ್ದಾರಿಯಲ್ಲಿ ವಕೀಲರ ವಾಹನಗಳಿಗೆ ಟೋಲ್ ವಿನಾಯಿತಿ ನೀಡಬೇಕು ಎಂದು ಕೋರಿ ರಾಜ್ಯ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಈ ಅರ್ಜಿ ಸಲ್ಲಿಸಿದ್ದು, ವಕೀಲರು ನ್ಯಾಯಾಂಗ ವ್ಯವಸ್ಥೆಯ ಪ್ರಮುಖ ಭಾಗವಾಗಿದ್ದಾರೆ. ಅವರ ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪಾವತಿಯಿಂದ ವಿನಾಯಿತಿ ನೀಡಬೇಕೆಂದು ಕೋರಿದ್ದಾರೆ. 

ಈಗಾಗಲೇ ನ್ಯಾಯಮೂರ್ತಿಗಳ ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪಾವತಿಯಿಂದ ವಿನಾಯಿತಿ ನೀಡಲಾಗಿದ್ದು, ವಕೀಲರು ನ್ಯಾಯಾಂಗ ವ್ಯವಸ್ಥೆಯ ಭಾಗವಾಗಿದ್ದಾರೆ. ಅವರ ವಾಹನಗಳಿಗೂ ಟೋಲ್ ಪಾವತಿಯಿಂದ ವಿನಾಯಿತಿ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಈ ಅರ್ಜಿ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಎಸ್.ಸುಜಾತ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News