ಒಳಮೊಗ್ರು: ಸ್ಕಿಡ್ ಆಗಿ ಬಿದ್ದ ಬೈಕ್; ಸವಾರ ಮೃತ್ಯು

Update: 2018-11-08 05:17 GMT

ಪುತ್ತೂರು, ನ.8: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಒಳಮೊಗ್ರು ಗ್ರಾಮದಲ್ಲಿ ಇಂದು ಬೆಳಗ್ಗೆ 10:30ರ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಕೃಷ್ಣಪ್ಪ ಗೌಡ ಎಂದು ಹೇಳಲಾಗಿದ್ದು, ಅವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಇವರು ಚಲಾಯಿಸುತ್ತಿದ್ದ ಬೈಕ್ ಒಳಮೊಗ್ರು ಗ್ರಾಮದ ಪರ್ಪುಂಜ ಎಂಬಲ್ಲಿ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಕೃಷ್ಣಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News