3 ವರ್ಷದ ಬಾಲಕಿಯ ಬಾಯಲ್ಲಿ ಪಟಾಕಿ ಸಿಡಿಸಿದ ಯುವಕ !

Update: 2018-11-08 14:53 GMT
ಸಾಂದರ್ಭಿಕ ಚಿತ್ರ

ಲಕ್ನೊ, ನ.8: ಯುವಕನೊಬ್ಬ ಚೇಷ್ಟೆ ಮಾಡುವ ಉದ್ದೇಶದಿಂದ ಮೂರು ವರ್ಷದ ಬಾಲಕಿಯ ಬಾಯಲ್ಲಿ ಪಟಾಕಿ ಇಟ್ಟು ಸಿಡಿಸಿದ ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ಮಿಲಾಕ್ ಗ್ರಾಮದ ದೌರಾಲಾ ರಸ್ತೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಮನೆಯೆದುರು ಆಟವಾಡುತ್ತಿದ್ದ ಮೂರು ವರ್ಷದ ತನ್ನ ಪುತ್ರಿಯ ಬಾಯಲ್ಲಿ ಸ್ಥಳೀಯ ಯುವಕ ಹರ್ಪಾಲ್ ಎಂಬಾತ ಪಟಾಕಿಯನ್ನು ಇರಿಸಿ ಅದಕ್ಕೆ ಬೆಂಕಿ ಕೊಟ್ಟಿದ್ದಾನೆ. ಪಟಾಕಿ ಬಾಯಲ್ಲೇ ಸಿಡಿದ ಕಾರಣ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ಬಾಲಕಿಯ ತಂದೆ ಶಶಿ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾನೆ. ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಾಯಿಗೆ 50 ಹೊಲಿಗೆ ಹಾಕಲಾಗಿದೆ. ಅಲ್ಲದೆ ಗಂಟಲಿಗೆ ಸೋಂಕು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಆತನ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News