ನ.9: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರೆಸಲು ಒತ್ತಾಯಿಸಿ ಧರಣಿ

Update: 2018-11-08 17:15 GMT

ಬೆಂಗಳೂರು, ನ. 8: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರೆಸಬೇಕೆಂದು ಒತ್ತಾಯಿಸಿ ನ.9ರಂದು ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಧರಣಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಶಿಕ್ಷಕರ ಹೋರಾಟ ಸಮಿತಿ ತಿಳಿಸಿದೆ.

ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಮಾಲತೇಶ ಬಬ್ಬಜ್ಜೆ, ಯಾವುದೇ ಕಾರಣಕ್ಕೂ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸದೆ, ವರ್ಗಾವಣೆ ಪ್ರಕ್ರಿಯೆಯ ಕೌನ್ಸೆಲಿಂಗ್‌ನ್ನು ಈ ವರ್ಷವೆ ಮುಗಿಸಲಿ ಹಾಗೂ ಶಿಕ್ಷಕರ ವರ್ಗಾವಣೆ ಕಾಯ್ದೆಯಲ್ಲಿರುವ ಅವೈಜ್ಞಾನಿಕ ನಿಯಮಗಳನ್ನು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಮಾಡುವಂತೆ ಆಗ್ರಹಿಸಿದರು.

ಮಹಿಳಾ ಶಿಕ್ಷಕರು ಹಾಗೂ ಪುರುಷ ಶಿಕ್ಷಕರು ಎಂಬ ಆದ್ಯತೆಯನ್ನು ರದ್ದುಪಡಿಸಿ ವರ್ಗಾವಣೆಯನ್ನು ಸೇವಾ ಜೇಷ್ಠತೆ ಆಧಾರದ ಮೇಲೆ ವರ್ಗಾವಣೆ ಮಾಡಬೇಕು. ಶೇ.20ರಷ್ಟು ಖಾಲಿ ಹುದ್ದೆ ಕೌನ್ಸೆಲಿಂಗ್ ಸಮಯದಲ್ಲಿ ಎಲ್ಲ ತಾಲೂಕಿನ ಶಿಕ್ಷಕರಿಗೆ ಅವಕಾಶ ನೀಡಬೇಕು. ಅಲ್ಲದೆ, ಅಂತರ್ ಘಟಕದಲ್ಲಿ ಕನಿಷ್ಠ ಸೇವಾವಧಿ ಸೇವೆ ಸಲ್ಲಿಸಿರುವ ಶಿಕ್ಷಕರಿಗೆ ಅವರವರ ಮೂಲ ಜಿಲ್ಲೆಗೆ ವರ್ಗಾವಣೆ ಆಗಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News