ಲೈಂಗಿಕ ಕಿರುಕುಳ ಆರೋಪ: ಬಿಜೆಪಿಯ ಪ್ರಧಾನ ಕಾರ್ಯದರ್ಶಿ ವಜಾ

Update: 2018-11-08 17:47 GMT

ಡೆಹ್ರಾಡೂನ್, ನ. 8: ಲೈಂಗಿಕ ಕಿರುಕುಳದ ಆರೋಪದಲ್ಲಿ ಉತ್ತರಾಖಂಡ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಂಜಯ್ ಕುಮಾರ್ ಅವರನ್ನು ವಜಾಗೊಳಿಸಲಾಗಿದೆ ಎಂದು ಆಡಳಿತಾರೂಡ ಬಿಜೆಪಿ ಗುರುವಾರ ದೃಢಪಡಿಸಿದೆ. ಹುದ್ದೆಯಿಂದ ತನ್ನನ್ನು ವಜಾಗೊಳಿಸುವಂತೆ ಕೋರಿ ಕುಮಾರ್ ಅವರು ಪಕ್ಷದ ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದರು. ಅವರ ಮನವಿ ಸ್ವೀಕರಿಸಲಾಗಿದೆ ಎಂದು ಪ್ರದೇಶ ಬಿಜೆಪಿ ಅಧ್ಯಕ್ಷ ಅಜಿತ್ ಭಟ್ ತಿಳಿಸಿದ್ದಾರೆ.

ಕುಮಾರ್ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಕಳೆದ ವಾರ ಬಿಜೆಪಿ ಕಾರ್ಯಕರ್ತೆಯೊಬ್ಬರು ಆರೋಪಿಸಿದ್ದರು. ಇದು ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News