ರೆಡ್ಡಿ ಬೇಟೆ..!

Update: 2018-11-08 18:16 GMT

ಆ್ಯಂಬಿಡೆಂಟ್ ಕಂಪೆನಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದ ತನಿಖೆ ಮೇಲೆ ಪ್ರಭಾವ ಬೀರಲು ಬರೋಬ್ಬರಿ 57 ಕೆಜಿ ಚಿನ್ನದ ಗಟ್ಟಿ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪತ್ತೆಗಾಗಿ, ರಾಜ್ಯದ ಗಡಿ ಪ್ರದೇಶ-ನೆರೆ ರಾಜ್ಯಗಳಲ್ಲಿ ಸಿಸಿಬಿ ತನಿಖಾಧಿಕಾರಿಗಳು ಬೀಡು ಬಿಟ್ಟಿದ್ದಾರೆ. ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದಾರೆ ಎನ್ನಲಾ ಗಿದ್ದು, ಬಳ್ಳಾರಿ, ಬೆಂಗಳೂರು, ನೆರೆ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶದಲ್ಲಿ ಜನಾರ್ದನ ರೆಡ್ಡಿಗಾಗಿ ಸಿಸಿಬಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ರೆಡ್ಡಿ ಸಂಬಂಧಿಕರ ಮತ್ತು ಆಪ್ತರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor