ನ.15ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Update: 2018-11-09 04:04 GMT

ಬೆಂಗಳೂರು, ನ.9: ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡುವ ದಿನ ಕೊನೆಗೂ ನಿಗದಿಯಾಗಿದ್ದು, ನ.15ರಂದು ಈ ವರ್ಷದ ಕನ್ನಡ  ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು 63 ಮಂದಿ ಸಾಧಕರಿಗೆ  ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನ.1ರಂದು ಪ್ರದಾನ ಮಾಡಬೇಕಿದ್ದ ರಾಜ್ಯೋತ್ಸವ ಪ್ರಶಸ್ತಿಯನ್ನು ಪಂಚ ಕ್ಷೇತ್ರಗಳ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಪ್ರಶಸ್ತಿ ವಿಜೇತರ ಪಟ್ಟಿ ಇನ್ನೂ ಪ್ರಕಟಗೊಂಡಿಲ್ಲ.

ಪ್ರಶಸ್ತಿಗೆ ಸಾಧಕರ ಪಟ್ಟಿಯನ್ನು ಮುಖ್ಯ ಮಂತ್ರಿ ಕುಮಾರಸ್ವಾಮಿ ಅಂತಿಮಗೊಳಿಸಿದ್ದಾರೆ. ಸಚಿವೆ ಡಾ.ಜಯಮಾಲಾ ಅವರಿಗೂ ಈ ಸಂಬಂಧ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News