ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಗೈರು

Update: 2018-11-09 13:25 GMT

ಬೆಂಗಳೂರು, ನ.9: ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನ.10ರಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿರುವ ಹಝ್ರತ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಸರು ಪ್ರಕಟವಾಗದಿರುವುದು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಉದ್ಘಾಟಿಸಲಿದ್ದು, ಅಮಿರೇ ಶರೀಅತ್ ಹಝ್ರತ್ ಮೌಲಾನ ಸಗೀರ್‌ ಅಹ್ಮದ್‌ ಖಾನ್ ಸಾಹೇಬ್ ರಶಾದಿ ಸಾನ್ನಿಧ್ಯ ವಹಿಸಲಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಯು.ಟಿ.ಖಾದರ್, ಝಮೀರ್‌ ಅಹ್ಮದ್‌ ಖಾನ್, ಡಾ.ಜಯಮಾಲಾ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ರಾಜ್ಯ ಸರಕಾರದ ದಿಲ್ಲಿಯ ವಿಶೇಷ ಪ್ರತಿನಿಧಿ ಸೈಯ್ಯದ್ ಮೊಹಿದ್ ಅಲ್ತಾಫ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಶಾಸಕ ಆರ್.ರೋಷನ್‌ ಬೇಗ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸಿಎಂಗೆ ವಿಶ್ರಾಂತಿ: ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಇಂದಿನಿಂದ ಮೂರು ದಿನಗಳ ವಿಶ್ರಾಂತಿ ಪಡೆಯಲಿದ್ದು, ತಮ್ಮ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯಲಿದ್ದಾರೆ. ಈ ಅವಧಿಯಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಮುಖ್ಯಮಂತ್ರಿಯ ಕಚೇರಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News