×
Ad

ಟಿಪ್ಪು ಜಯಂತಿ : ದ.ಕ. ಜಿಲ್ಲಾದ್ಯಂತ ನಿಷೇಧಾಜ್ಞೆ

Update: 2018-11-09 18:49 IST

ಮಂಗಳೂರು, ನ.9: ಟಿಪ್ಪು ಜಯಂತಿ ಸರಕಾರದ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಬಾರದ ರೀತಿಯಲ್ಲಿ ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ 6 ಗಂಟೆಯಿಂದ ನ.11ರ ಮಧ್ಯರಾತ್ರಿ 12 ಗಂಟೆಯವರೆಗೆ ಯಾವುದೇ ಸಾರ್ವಜನಿಕ ರಾಜಕೀಯ ಮುಂತಾದ ಬಹಿರಂಗ ಸಭೆ ಸಮಾರಂಭ, ಜಾಥಾ ಮತ್ತು ಮೆರವಣಿಗೆಗಳನ್ನು ನಿರ್ಬಂಧಿಸಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿಯನ್ನು ಆಧರಿಸಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ. ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿ, ಸಂಘಟನೆಯ ಸದಸ್ಯರು ಯಾವುದೇ ರೀತಿಯ ಪ್ರತಿಭಟನೆ ಮೆರವಣಿಗೆ, ಬ್ಯಾನರ್ಸ್‌, ಬಂಟಿಂಗ್ಸ್, ಬಾವುಟ, ಧ್ವನಿವರ್ಧಕ ಅಳವಡಿಸಿ ಘೋಷಣೆಗಳನ್ನು ಕೂಗದಂತೆ ಹಾಗೂ ಗುಂಪು ಗುಂಪಾಗಿ ಸೇರಿ ಪ್ರತಿಭಟನೆಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News