ಉಡುಪಿ: ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಧರಣಿ
ಉಡುಪಿ, ನ.9: ಟಿಪ್ಪು ಜಯಂತಿಯನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿಯ ನೇತೃತ್ವದಲ್ಲಿ ಶುಕ್ರವಾರ ಕಡಿಯಾಳಿಯ ಬಿಜೆಪಿ ಕಚೇರಿಯ ಎದುರು ಧರಣಿ ನಡೆಸಲಾಯಿತು.
ಧರಣಿಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಸಮ್ಮಿಶ್ರ ಸರಕಾರವು ಟಿಪ್ಪು ಜಯಂತಿ ಯನ್ನು ಸಿದ್ದರಾಮಯ್ಯ ಬೆಂಬಲ ಹಿಂದಕ್ಕೆ ಪಡೆಯುತ್ತಾರೆ ಎಂಬ ಭಯದಿಂದ ಆಚರಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜ್ಯ 6.50 ಕೋಟಿ ಜನರ ಪ್ರತಿನಿಧಿ ಯಾಗಿರುವ ಕುಮಾರಸ್ವಾಮಿ ನಾಳೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುವ ಟಿಪ್ಪು ಜಯಂತಿಯನ್ನು ಆಚರಿಸಬಾರದು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ಶೀಲಾ ಕೆ.ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ರಜನಿ ಹೆಬ್ಬಾರ್, ರಾಘವೇಂದ್ರ ಕಿಣಿ, ನಯನ ಗಣೇಶ್, ವೀಣಾ ಶೆಟ್ಟಿ, ಸಂಧ್ಯಾ ರಮೇಶ್, ಶಾಮಲ ಕುಂದರ್, ರೇಶ್ಮಾ ಉದಯ ಶೆಟ್ಟಿ, ಉಪೇಂದ್ರ ನಾಯಕ್, ಮಂಜುನಾಥ್ ಮಣಿಪಾಲ್, ಕೃಷ್ಣರಾಜ ಕೊಡಂಚ ಮೊದಲಾದವರು ಉಪ ಸ್ಥಿತರಿದ್ದರು.