ಮಡಿಕೇರಿ: ಟಿಪ್ಪು ಜಯಂತಿಗೆ ತೀವ್ರ ವಿರೋಧ; ಹಲವರ ಬಂಧನ

Update: 2018-11-10 05:01 GMT

ಮಡಿಕೇರಿ, ನ. 10 : ತೀವ್ರ ವಿರೋಧದ ನಡುವೆ ಜಿಲ್ಲಾಡಳಿತ ಟಿಪ್ಪು ಜಯಂತಿ ಆಚರಣೆಗೆ ಮುಂದಾದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ಶಾಸಕರು, ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ವಿಶ್ವಹಿಂದೂ ಪರಿಷತ್, ಭಜರಂಗದಳ ಸೇರಿದಂತೆ ಸಂಘಟನೆಗಳ ಕಾರ್ಯಕರ್ತರು ಮಡಿಕೇರಿಯ ಓಂಕಾರೇಶ್ವರ ದೇವಾಲಯದಲ್ಲಿ ಮೃತ ಕುಟ್ಟಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುವ ಕೋಟೆ ಆವರಣಕ್ಕೆ ತೆರಳಲು ಪ್ರಯತ್ನಿಸಿದಾಗ ದೇವಾಲಯದ ಬಳಿಯೇ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.

ಮತ್ತೊಂದೆಡೆ ಕೋಟೆ ಆವರಣದಲ್ಲಿ ಪ್ರತಿಭಟನೆ ನಡೆಸಿದ ಶಾಸಕ ಅಪ್ಪಚ್ಚು ರಂಜನ್, ಎಮ್‍ಎಲ್‍ಸಿ ಸುನೀಲ್ ಸುಬ್ರಹ್ಮಣಿ, ಜಿ. ಪಂ. ಅಧ್ಯಕ್ಷ ಬಿ.ಎ. ಹರೀಶ್ ಸೇರಿದಂತೆ ಹಲವರನ್ನು ಪೋಲಿಸರು ಬಂಧಿಸಿದರು. ನಂತರ ಜಿಲ್ಲಾಡಳಿತ ವತಿಯಿಂದ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಿತು.

ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News