×
Ad

ನ.14ರಿಂದ ಅಖಿಲ ಭಾರತ ಸಹಕಾರ ಸಪ್ತಾಹ

Update: 2018-11-10 21:10 IST

ಉಡುಪಿ, ನ.10: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ‘ಗ್ರಾಮೀಣ ಸಮೃದ್ದಿ ಗಾಗಿ ಸಹಕಾರ ಸಂಸ್ಥೆಗಳ ಮೂಲಕ ಉತ್ತಮ ಆಡಳಿತ ಮತ್ತು ಸರ್ವ ರನ್ನೊಳಗೊಂಡ ಬೆಳವಣಿಗೆ’ ಎಂಬ ಧ್ಯೇಯ ವಾಕ್ಯದೊಂದಿಗೆ 65ನೆ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ.14ರಿಂದ 20ರವರೆಗೆ ಉಡುಪಿ ಜಿಲ್ಲೆಯಾ ದ್ಯಂತ ಹಮ್ಮಿಕೊಳ್ಳಲಾಗಿದೆ.

ನ.14ರಂದು ಅಪರಾಹ್ನ 3:30ಕ್ಕೆ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಸಹಕಾರ ಸಪ್ತಾಹದ ಉದ್ಘಾಟನೆಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿರುವರು. ಅಧ್ಯಕ್ಷತೆ ಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ವಹಿಸ ಲಿರುವರು.

ನ.15ರಂದು ಬೆಳಗ್ಗೆ 10:30ಕ್ಕೆ ‘ಸಹಕಾರ ಸಂಸ್ಥೆಗಳ ಮೂಲಕ ಸರಕಾರಿ ಯೋಜನೆಗಳು ಮತ್ತು ಆದಾಯೋತ್ಪನ್ನ ಕುರಿತು ಜಾಗೃತಿ ಮೂಡಿಸುವ ದಿನವನ್ನು ಪಡುಬಿದ್ರೆ ಬಂಟರ ಭವನದಲ್ಲಿ, ನ.16ರಂದು ಸಂಜೆ 4ಗಂಟೆಗೆ ಸಹಕಾರ ಸಂಸ್ಥೆಗಳ ಮೂಲಕ ಮೌಲ್ಯವರ್ಧನೆ ಮತ್ತು ಬ್ರಾಂಡ್ ನಿರ್ಮಾಣ ದಿನವನ್ನು ಖಂಬದಕೋಣೆ ರೈತರ ಸೇವಾ ಸಹಕಾರ ಸಂಘದ ಸಭಾಂಗಣದಲ್ಲಿ, ನ.17ರಂದು ಬೆಳಗ್ಗೆ 10ಗಂಟೆಗೆ ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವ ನಿರ್ಮಾಣ ದಿನವನ್ನು ಮಲ್ಪೆ ಏಳೂರ ಮೊಗವೀರ ಸಭಾಭವನದಲ್ಲಿ, ನ.18 ರಂದು ಬೆಳಗ್ಗೆ 11.30ಕ್ಕೆ ಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳದ ಕೃಷಿಯಲ್ಲಿ ಸಹಕಾರ ಸಂಸ್ಥೆಗಳ ಪ್ರಮುಖ ಪಾತ್ರ ದಿನವನ್ನು ಕುಂದಾಪುರ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ, ನ.19ರಂದು ಅಪರಾಹ್ನ 2.30 ಕ್ಕೆ ಯುವಜನ ಮಹಿಳಾ ಮತ್ತು ಅಬಲ ವರ್ಗಕ್ಕಾಗಿ ಸಹಕಾರ ಸಂಸ್ಥೆಗಳು ದಿನವನ್ನು ಕಾರ್ಕಳ ಕುಕ್ಕುಂದೂರು ರಾಜಾಪುರ ಸಾರಸ್ವತ ಸೊಸೈಟಿ ಸಭಾಂಗಣ ದಲ್ಲಿ, ನ.20ರಂದು ಅಪರಾಹ್ನ 3ಗಂಟೆಗೆ ಸಪ್ತಾಹದ ಸಮಾರೋಪ ಸಮಾ ರಂಭವನ್ನು ಸಾಲಿಗ್ರಾಮ ಗಿರಿಜಾ ಕಲ್ಯಾಣ ಮಂಟಪದಲ್ಲಿ ಏರ್ಪಡಿಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News