×
Ad

ಜಮ್ಮುಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಸಾವು

Update: 2018-11-10 23:38 IST

ಶ್ರೀನಗರ, ನ. 10: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಪುಲ್ವಾಮಾದ ಟಿಕ್ಕೇನ್ ಗ್ರಾಮವನ್ನು ಸುತ್ತುವರಿದು ಶೋಧ ನಡೆಸುತ್ತಿದ್ದ ಸಂದರ್ಭ ಉಗ್ರರು ಗುಂಡು ಹಾರಿಸಿದರು. ಇದು ಎನ್‌ಕೌಂಟರ್‌ಗೆ ಕಾರಣವಾಯಿತು. ಎನ್‌ಕೌಂಟರ್ ಸ್ಥಳದಲ್ಲಿ ಇಬ್ಬರು ಉಗ್ರರ ಮೃತದೇಹ ಪತ್ತೆಯಾಯಿತು. ಅವರು ಗುರುತು ಇನ್ನಷ್ಟೆ ತಿಳಿಯಬೇಕಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಟ್ರಾಲ್‌ನಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಜೈಸೆ ಮುಹಮ್ಮದ್ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಹತ್ಯೆಗೈದಿತ್ತು. ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News