ಭಟ್ಕಳ: ರಿಕ್ಷಾ - ಕಾರು ನಡುವೆ ಅಪಘಾತ; ಮಹಿಳೆ ಮೃತ್ಯು

Update: 2018-11-11 11:14 GMT

ಭಟ್ಕಳ, ನ. 11: ರಂಗಿನಕಟ್ಟೆ ಕೋಟ್ ಸಮೀಪ ಎರಡು ಆಟೋ ರಿಕ್ಷಾ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು 5 ಮಂದಿ ಗಾಯಗೊಂಡ ಘಟನೆ ರವಿವಾರ ಬೆಳಗ್ಗೆ ನಡೆದಿದೆ.

ಮೃತ ಮಹಿಳೆಯನ್ನು ಶಿರಾಲಿ ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಉಡುಪಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News