ಚಿಕ್ಕಮಗಳೂರು: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ; ಬಿಜೆಪಿ ಕಾರ್ಯಕರ್ತರ ಬಂಧನ, ಬಿಡುಗಡೆ

Update: 2018-11-11 12:19 GMT

ಚಿಕ್ಕಮಗಳೂರು, ನ.11: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾಜಿ ಸಚಿವ ಟಿ.ಬಿ.ಜಯಚಂದ್ರ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ರವಿವಾರ ಪ್ರತಿಭಟನೆಗೆ ಮುಂದಾಗಿದ್ದು, ಟಿಪ್ಪು ಜಯಂತಿ ಹಿನ್ನೆಲೆ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರಿಂದ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

ರವಿವಾರ ಬೆಳಿಗ್ಗೆ ಟಿ.ಬಿ. ಜಯಚಂದ್ರ ಅವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾಗುತ್ತಿದ್ದಂತೆ ಪೊಲೀಸರು ಬಿಜೆಪಿ ಕಚೇರಿ ಎದುರು 20ಕ್ಕೂ ಹೆಚ್ಚು ಪ್ರತಿಭಟನಕಾರರನ್ನು ಬಂಧಿಸಿದರು. ಮಾಜಿ ಸಚಿವ ಜಯಚಂದ್ರ ಅವರು ಕ್ಷಮೆ ಕೇಳುವಂತೆ  ಈ ಸಂದರ್ಭದಲ್ಲಿ ಪ್ರತಿಭಟನಕಾರರು ಒತ್ತಾಯಿಸಿದರು.

ಬೀಗಿ ಪೊಲೀಸ್ ಬಂದೋಬಸ್ತ್: ಮೋದಿ ವಿರುದ್ಧ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಸುತ್ತಮುತ್ತ ಬೀಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಬಿಜೆಪಿ ಕಚೇರಿ ಎದುರು ಹಾದು ಹೋಗುವ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ರವಿವಾರ ಸಂಜೆ 6 ಗಂಟೆ ವರೆಗೂ ಸೆಕ್ಷನ್ 144 ಜಾರಿಯಲ್ಲಿದ್ದು, ಪ್ರತಿಭಟನೆ ನಡೆಸದಂತೆ ಪ್ರತಿಭಟನಕಾರರಿಗೆ ಮನವರಿಕೆ ಮಾಡಿಕೊಟ್ಟರು. ಆದರೆ ಇದಕ್ಕೆ ಜಗ್ಗದೇ ಪ್ರತಿಭಟನೆ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News