ಬೆಂಗಳೂರು: ಲಿಫ್ಟ್ ಕುಸಿದು ನಾಲ್ವರಿಗೆ ಗಾಯ

Update: 2018-11-12 14:36 GMT

ಬೆಂಗಳೂರು, ನ.12: ಖಾಸಗಿ ಹೊಟೇಲೊಂದರ ಲಿಫ್ಟ್ ಕುಸಿದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಇಲ್ಲಿನ ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಎಂ.ಎಂ.ರಸ್ತೆಯಲ್ಲಿರುವ ಹೊಟೇಲೊಂದರಲ್ಲಿ ರಾತ್ರಿ ಲಿಫ್ಟ್ ಕುಸಿದಿದೆ. ಇದರ ಪರಿಣಾಮವಾಗಿ ನಾಲ್ವರು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಗಾಯಗೊಂಡ ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪುಲಕೇಶಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News