ಕಮಿಷನ್ ಕೊಟ್ಟವರಿಗೆ ಮಾತ್ರ ಸಾಲ ಮಂಜೂರು: ಆರೋಪ

Update: 2018-11-12 14:37 GMT

ಬೆಂಗಳೂರು, ನ. 12: ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧಿಕಾರಿಗಳು ಕೇಳಿದಷ್ಟು ಪರ್ಸಂಟೇಜ್ ಕೊಟ್ಟವರಿಗೆ ಮಾತ್ರ ಸಾಲ ಮಂಜೂರು ಮಾಡುತ್ತಾರೆ ಎಂದು ಕೋಲಾರ ಜಿಲ್ಲಾ ಎಸ್‌ಕೆಆರ್‌ಪಿ ಫಲಾನುಭವಿ ಶ್ರೀನಿವಾಸ್ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯವಸ್ಥಾಪಕ ನಿರ್ದೇಶಕ ಗಣೇಶಪ್ಪ ಹಾಗೂ ಜನರಲ್ ಮ್ಯಾನೇಜರ್ ನಾಗರಾಜಪ್ಪ ಒಂದು ಲಕ್ಷ ರೂ. ಸಾಲ ಮಂಜೂರು ಮಾಡಲು ಶೇ.7ರಿಂದ 10ರವರೆಗೂ ಪರ್ಸಂಟೇಜ್‌ನ್ನು ಫಿಕ್ಸ್ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಲಂಚದ ರೂಪದಲ್ಲಿ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗದ ವಿವಿದೋದ್ದೇಶಗಳಿಗೆ ಸಾಲ ಸೌಲಭ್ಯ ಪಡೆಯಲು ಇಚ್ಛಿಸಿ 254 ಫಲಾನುಭವಿಗಳು ಅರ್ಜಿ ಹಾಕಿದ್ದಾರೆ. ಕಳೆದ ವರ್ಷ ಜಿಲ್ಲಾ ಕಚೇರಿಯಿಂದ ಕೇಂದ್ರ ಕಚೇರಿಗೆ ಶಿಫಾರಸ್ಸು ಆಗಿದ್ದು, ಅಧಿಕಾರಿಗಳು ಪರ್ಸಂಟೇಜ್ ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News