ಶಬರಿಮಲೆ ಮರು ಪರಿಶೀಲನಾ ಅರ್ಜಿ ವಿಚಾರಣೆ ತೆರೆದ ನ್ಯಾಯಲಯದಲ್ಲಲ್ಲ

Update: 2018-11-12 17:13 GMT

ಹೊಸದಿಲ್ಲಿ, ನ. 12: ಶಬರಿಮಲೆ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶಾವಕಾಶ ನೀಡಿ ಸಾಂವಿಧಾನಿಕ ಪೀಠ ನೀಡಿದ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ 19 ಮರು ಪರಿಶೀಲನಾ ಅರ್ಜಿಯನ್ನು ಒಟ್ಟಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ಮಂಗಳವಾರ ಅಪರಾಹ್ನ 3 ಗಂಟೆಗೆ ವಿಚಾರಣೆ ನಡೆಸಲಿದೆ.

 ಆದಾಗ್ಯೂ, ಈ ಮರು ಪರಿಶೀಲನಾ ಮನವಿ ವಿಚಾರಣೆ ತೆರೆದ ನ್ಯಾಯಾಲಯದಲ್ಲಿ ನಡೆಯದೆ, ಮುಖ್ಯ ನ್ಯಾಯಮೂರ್ತಿ ಅವರ ಚೇಂಬರ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಸ್ಥಾನದಲ್ಲಿದ್ದ ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಈ ಚಾರಿತ್ರಿಕ ತೀರ್ಪು ನೀಡಿದ್ದರು. ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ನಾರಿಮನ್, ಎ.ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ ಹಾಗೂ ಇಂದು ಮಲ್ಹೋತ್ರಾ ಇದ್ದರು. ಪುನರ್ ಪರಿಶೀಲನಾ ಮನವಿಯನ್ನು ಕೂಡ ಈ ತೀರ್ಪು ನೀಡಿದ ಪೀಠವೇ ವಿಚಾರಣೆ ನಡೆಸಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News