ಹೊನ್ನಾವರ: ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಮೃತ್ಯು

Update: 2018-11-13 06:24 GMT

ಹೊನ್ನಾವರ, ನ. 13: ಚಾಲಕನ ನಿಯಂತ್ರಣ ತಪ್ಪಿದ ಕಾರು ಗುಡ್ಡಕ್ಕೆ‌ ಢಿಕ್ಕಿ ಹೊಡೆದು ನಂತರ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟು, 7 ಮಂದಿ ಗಂಭೀರ ಗಾಯಗೊಂಡ ಘಟನೆ ಆರೊಳ್ಳಿ ಕ್ರಾಸ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಆನಂದಪುರ ಮೂಲದ ಫಾತಿಮಾ (65), ರುಕಿಯಾ (45) ಹಾಗು ಚಾಬುಸಾಬ್ ಎಂದು ಗುರುತಿಸಲಾಗಿದೆ. 

ಗೋವಾದಲ್ಲಿ ಮದುವೆ ಕಾರ್ಯ ಮುಗಿಸಿ ವಾಪಸಾಗುತ್ತಿದ್ದಾಗ ವೇಳೆ ಈ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇತರ 7 ಮಂದಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News