ತೆಲಂಗಾಣ ಅಸೆಂಬ್ಲಿ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್

Update: 2018-11-13 05:22 GMT

ಹೊಸದಿಲ್ಲಿ, ನ.13: ತೆಲಂಗಾಣದಲ್ಲಿ ಡಿ.7 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸೋಮವಾರ ರಾತ್ರಿ 65 ಅಭ್ಯರ್ಥಿಗಳಿರುವ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸೆಂಟ್ರಲ್ ಎಲೆಕ್ಷನ್ ಕಮಿಟಿ(ಸಿಇಸಿ)ಯ ಮ್ಯಾರಥಾನ್ ಸಭೆಯ ಬಳಿಕ ಮೊದಲ ಪಟ್ಟಿಯನ್ನು ಹೊರ ತರಲಾಗಿದೆ. ಸಭೆಯಲ್ಲಿ ಎಲ್ಲ ರಾಜ್ಯ ಕಾಂಗ್ರೆಸ್ ನಾಯಕರು ಇದ್ದರು. ಸೋಮವಾರ ರಾತ್ರಿ ಸಿಇಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.

 ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ(ಟಿಡಿಪಿ)ದೊಂದಿಗೆ ಹಲವು ಕ್ಷೇತ್ರಗಳಲ್ಲಿ ಚುನಾವಣಾ ಮೈತ್ರಿ ಮಾಡಿಕೊಳ್ಳಲು ಪ್ರಯತ್ನ ಮುಂದುವರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News