ನ. 17: ಉದ್ಯಾವರದಲ್ಲಿ ಯುಎಫ್‌ಸಿ ಮಕ್ಕಳ ಹಬ್ಬ-2018

Update: 2018-11-13 14:26 GMT

ಉದ್ಯಾವರ, ನ.13: ಉದ್ಯಾವರದ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಆಚರಿಸಲ್ಪಡುವ 9ನೇ ವರ್ಷದ ಉಡುಪಿ ಜಿಲ್ಲಾ ಮಟ್ಟದ ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಸ್ಪರ್ಧೆ ‘ಯುಎಫ್‌ಸಿ ಮಕ್ಕಳ ಹಬ್ಬ-2018’ ನ.17ರ  ಬೆಳಗ್ಗೆ 9:30ರಿಂದ ಸಂಜೆ 4:30ರವರೆಗೆ ಉದ್ಯಾವರದ ಶ್ರೀ ವಿಠೋಬ ರುಖುಮಾಯಿ ನಾರಾುಣಗುರು ಮಂದಿರದಲ್ಲಿ ನಡೆಯಲಿದೆ.

ಮಕ್ಕಳ ಹಬ್ಬವನ್ನು ಗೋಲ್ಡನ್ ಬುಕ್ ರೆಕಾರ್ಡ್ ಹಾಗೂ ಗಿನ್ನಿಸ್ ದಾಖಲೆ ಬರೆದಿರುವ ಸಾಧಕಿ ತನುಶ್ರೀ ಪಿತ್ರೋಡಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ.ಮಂಜುನಾಥ ಕೋಟ್ಯಾನ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಲರ್ಸ್‌ ಸೂಪರ್ ವಾಹಿನಿಯ ಕನ್ನಡ ಕೋಗಿಲೆ ಸಂಗೀತ ರಿಯಾಲಿಟಿ ಶೋನ ಪ್ರತಿಭೆ ಲಿಖಿತ್ ಉಮೇಶ್ ಕರ್ಕೆರ ಇವರನ್ನು ಸಂಮಾನಿಸಲಾಗುವುದು.

ಸಂಜೆ 4 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಖ್ಯಾತ ನೃತ್ಯ ತಜ್ಞೆ ನೃತ್ಯನಿಕೇತನ ಕೊಡವೂರು ಇದರ ನಿರ್ದೇಶಕಿ ಮಾನಸಿ ಸುಧೀರ್ ಸಮಾರೋಪ ಭಾಷಣ ಮಾಡುವರು. ಅಧ್ಯಕ್ಷತೆಯನ್ನು ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಸಿ ವಹಿಸುವರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಡಿಡಿಪಿಐ ಶೇಷಶಯನ ಕಾರಿಂಜ, ಆರ್‌ಜೆ ಎರೋಲ್ ಗೊನ್ಸಾಲ್ವಿಸ್, ಉದ್ಯಾವರ ಬಿಲ್ಲವ ಮಹಾಜನ ಸಂಘದ ಅಧ್ಯಕ್ಷ ಪ್ರತಾಪಕುಮಾರ್ ಹಾಗೂ ಉದ್ಯಾವರ ಗ್ರಾಪಂ ಉಪಾಧ್ಯಕ್ಷ ರಿಯಾಝ್ ಪಳ್ಳಿ ಭಾಗವಹಿಸುವರು ಎಂದು ಸಂಸ್ಥೆ ಅಧ್ಯಕ್ಷ ತಿಲಕ್‌ರಾಜ್ ಸಾಲ್ಯಾನ್ ಮತ್ತು ಪ್ರಧಾನ ಕಾರ್ಯದರ್ಶಿ ಗಿರೀಶ್ ಗುಡ್ಡೆಯಂಗಡಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News