ಉದ್ಯಾವರ: ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಸಾಮೂಹಿಕ ನೃತ್ಯ ಸ್ಪರ್ಧೆ

Update: 2018-11-13 14:31 GMT

ಉಡುಪಿ, ನ.13: ಉದ್ಯಾವರ ಫ್ರೆಂಡ್ಸ್ ಸರ್ಕಲ್ ವತಿಯಿಂದ ಯುಎಫ್‌ಸಿ ಮಕ್ಕಳ ಹಬ್ಬದ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಮೂಹಿಕ ನೃತ್ಯ ಸ್ಪರ್ಧೆಯನ್ನು ನ.17ರಂದು ಉದ್ಯಾವರದ ಶ್ರೀ ವಿಠೋಬ ರುಖುಮಾಯಿ ನಾರಾಯಣ ಮಂದಿರದಲ್ಲಿ ಆಯೋಜಿಸಲಾಗಿದೆ.

ಇದರಲ್ಲಿ ವಿಜೇತ ತಂಡಗಳಿಗೆ ಎರಡೂ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಕ್ರಮವಾಗಿ 5,000, 3,000 ಹಾಗೂ 2,000 ರೂ. ನಗದು ಬಹುಮಾನ, ಸ್ಮರಣಿಕೆ, ಪ್ರಮಾಣ ಪತ್ರ ನೀಡಲಾಗುವುದು. ಅಲ್ಲದೇ ಹಬ್ಬದಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ತಲಾ ರೂ. 1,000 ನಗದು, ಸ್ಮರಣಿಕೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು ಎಂದು ಉದ್ಯಾವರ ಫ್ರೆಂಡ್ಸ್ ಸರ್ಲ್‌ನ ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News