ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

Update: 2018-11-13 14:38 GMT

ಉಡುಪಿ, ನ.13: ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರಕೇಂದ್ರ ಗ್ರಂಥಾಲಯ ಉಡುಪಿ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ -2018ರ ಅಂಗವಾಗಿ ನಗರಸಭಾ ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಮಂಗಳವಾರ ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು.

ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ (1ರಿಂದ 4ನೇ ತರಗತಿ) ‘ಪುಸ್ತಕ ಓದುವ ಸ್ಪರ್ಧೆ’, ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ (5ರಿಂದ 7ನೇ ತರಗತಿ) ‘ನಟನೆ ಮೂಲಕ ಕಥೆ ಹೇಳುವ ಸ್ಪರ್ಧೆ’ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ‘ಲಿಖಿತ ರಸ ಪ್ರಶ್ನೆ’ ಸ್ಪರ್ಧೆಗಳು ನಡೆದವು.

ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ. ಇವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಹಿರಿಯ ಲೇಖಕಿಯರಾದ ಶಾರದಾ ಭಟ್, ಇಂದಿರಾ ಹಾಲಂಬಿ ಹಾಗೂ ಬಡ ಎರ್ಮಾಳು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಅನುರಾಧಾ ಎಚ್.ಎಂ. ಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ಸುಮಾರು 160 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಡುಪಿ ನಗರ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮ ಎಂ. ಕಾರ್ಯಕ್ರಮ ನಿರೂಪಿಸಿ, ಸುನೀತಾ ವಂದಿಸಿದರು.

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ನ.14ರಂದು ಬೆಳಗ್ಗೆ 11ಕ್ಕೆ ನಗರಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಉದ್ಘಾಟನೆಗೊಳ್ಳಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News