ಉಡುಪಿ ಜಿಪಂ ಸಿಇಒ ವರ್ಗಾವಣೆ

Update: 2018-11-13 15:51 GMT

ಉಡುಪಿ, ನ.13: ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

2017ರ ಆ.19ರಂದು ಉಡುಪಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿ ಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಇವರನ್ನು ಇದೀಗ ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಸಚಿವರಾಗಿ ನೇಮಿಸಿ ವರ್ಗಾಯಿಸಲಾಗಿದೆ.

ಉಡುಪಿ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಯಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಆಡಳಿತಾಧಿಕಾರಿಯಾಗಿದ್ದ ಪಿ.ವಸಂತ ಕುಮಾರ್ ಐಎಎಸ್ ಅವರನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News