ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2018-11-13 16:20 GMT

ಬೆಂಗಳೂರು, ನ.13: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶನಾಲಯದ ಮುಖ್ಯ ಆಡಳಿತಾಧಿಕಾರಿಯಾಗಿದ್ದ ಪಿ.ವಸಂತಕುಮಾರ್ ಅವರನ್ನು ಉಡುಪಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಶಿವಾನಂದ ಕಾಪಶಿಯನ್ನು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News