ಭತ್ತದ ಬೆಲೆ ಕುಸಿತ: ರೈತರ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ

Update: 2018-11-13 16:36 GMT

ಬೆಂಗಳೂರು, ನ.13: ಭತ್ತದ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ಸಂಕಷ್ಟಕ್ಕೆ ಧಾವಿಸಿರುವ ರಾಜ್ಯ ಸರ್ಕಾರ, ಪ್ರತಿ ಕ್ವಿಂಟಾಲ್ ಭತ್ತಕ್ಕೆ 1600 ರೂ. ನಂತೆ ಖರೀದಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉನ್ನತ ಅಧಿಕಾರಿಗಳ ಸಭೆ ನಡೆಸಿ, ತಕ್ಷಣವೇ ಮಾರುಕಟ್ಟೆ ಮೂಲಕ ಪ್ರತಿ ಕ್ವಿಂಟಾಲ್ ಭತ್ತಕ್ಕೆ 1600 ರೂ. ನಂತೆ ಖರೀದಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.

ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ನಾಡಗೌಡ ವೆಂಕಟರಾವ್ ಅವರು, ಭತ್ತದ ಬೆಳೆಯ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಗಮನ ಸೆಳೆದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕೂಡಲೇ ಮಾರುಕಟ್ಟೆಯ ಮೂಲಕ ಒಂದು ಕ್ವಿಂಟಾಲ್ ಗೆ 1600 ರೂ. ನಂತೆ ಖರೀದಿಸಬೇಕೆಂದು ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News