ಉಡುಪಿ ಜಿಲ್ಲಾ ಮಟ್ಟದ ಪ್ರೌಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಸ್ಪರ್ಧೆ

Update: 2018-11-13 16:39 GMT

ಶಿರ್ವ, ನ.13: ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿ ಗಳಿಗಾಗಿ 5ನೇ ವರ್ಷದ ವಿಜ್ಞಾನ ಸಂಬಂಧಿ ವಿಷಯಗಳ ಸ್ಪರ್ಧೆ ಸಾಯನ್ಸ್ ಕ್ವೆಸ್ಟ್ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಲಾಗಿತ್ತು.

 ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಲೋಕೇಶಪ್ಪಮಾತನಾಡಿ, ವಿಜ್ಞಾನ ಇಂದು ನಮ್ಮ ಜೀವನದ ಎಲ್ಲಾ ವಿಷಯಗಳಲ್ಲೂ ಆವರಿಸಿಕೊಂಡಿದೆ. ಆಧುನಿಕ ಬದುಕಿನಲ್ಲಿ ವಿಜ್ಞಾನ ತಂದಿರುವ ಬದಲಾವಣೆಗಳು ಅಪಾರ. ಆದರೆ ನಾವು ಇದ್ಯಾವುದನ್ನೂ ಗಮನಿಸದೆ ವಿಜ್ಞಾನದ ಫಲವನ್ನಷ್ಟೇ ಅನುಭವಿಸು ತ್ತಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಉದ್ಘಾಟಿಸಿದರು. ಶಿರ್ವ ವಿದ್ಯಾವರ್ಧಕ ಸಂಘದ ಮುಖ್ಯ ಆಡಳಿತಾಧಿಕಾರಿ ಪ್ರೊ.ಭಾಸ್ಕರ ಶೆಟ್ಟಿ ಶುಭಾಶಂಸನೆಗೈದರು. ಬಂಟಕಲ್ಲು ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರೊಫೆಸರ್ ರಾಜಶ್ರೀ ನಂಬಿಯಾರ್ ಕ್ವಿಝ್ ್ರಶ್ನೆಪತ್ರಿಕೆ ಬಿಡುಗಡೆಗೊಳಿಸಿದರು.

ಶಿರ್ವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಸುಬ್ಬಯ್ಯ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ನಿಟ್ಟೆ ಎನ್‌ಎಂಎಎನ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶು ಪಾಲ ಡಾ.ನಿರಂಜನ್ ಚಿಪ್ಲೊಣಕರ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ವಿಜ್ಞಾನ ರಸಪ್ರಶ್ನೆ, ತೇಪೆ ಚಿತ್ರಗಾರಿಕೆ, ವಿಜ್ಞಾನಿಯ ಭಾವಚಿತ್ರ ರಚೆ ಸ್ಪರ್ಧೆ ಯನ್ನು ಏರ್ಪಡಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ರಾವ್ ಸ್ವಾಗತಿಸಿದರು. ವಿಜ್ಞಾನ ವಿಭಾಗದ ಮುಖ್ಯಸ್ಥ ವಸುದೀಪ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯ ಶಿಕ್ಷಕಿ ಶಕಿಲಾ ವಂದಿಸಿದರು. ಶಿಕ್ಷಕಿಯರಾದ ಸುಪ್ರಿತಾ ಮತ್ತು ವಸಂತಿ ಬಾಯಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News