ಕುತೂಹಲವೇ ಎಲ್ಲ ಸಂಶೋಧನೆಗಳ ಮೂಲ: ಡಾ.ಚಿಪ್ಲೋಂಕರ್

Update: 2018-11-13 16:43 GMT

ಶಿರ್ವ, ನ.13: ವಿಜ್ಞಾನದ ಮತ್ತು ತಂತ್ರಜ್ಞಾನದ ಪ್ರತೀ ಸಂಶೋಧನೆಗಳು ತನ್ನದೇ ಆದ ವೈಶಿಷ್ಟತೆಯನ್ನು ಹೊಂದಿರುತ್ತದೆ. ಒಂದು ವಿಷಯದಲ್ಲಿ ಮೂಡಿದ ಕುತೂಹಲವೇ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಎಲ್ಲ ಸಂಶೋಧನೆಗಳ ಮೂಲವಾಗಿದೆ. ವಿದ್ಯಾರ್ಥಿಗಳು ವಿಜ್ಞಾನ ಸಂಬಂಧಿ ವಿಷಯ ಗಳಲ್ಲಿ ಕುತೂಹಲ ಬೆಳೆಸಿಕೊಂಡಲ್ಲಿ ವಿಶೇಷ ಸಾಧನೆ ಮಾಡಲು ಸಾಧ್ಯ ಎಂದು ನಿಟ್ಟೆ ಎನ್‌ಎಂಎಎನ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ನಿರಂಜನ್ ಚಿಪ್ಲೋಂಕರ್ ಹೇಳಿದ್ದಾರೆ.

ಶಿರ್ವದ ಹಿಂದೂ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಸಹಕಾರದೊಂದಿಗೆ ಮಂಗಳವಾರ ಕಾಲೇಜಿನಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ವೈವಿಧ್ಯಮಯ ವಿಜ್ಞಾನ ವಿಷಯಗಳ ಕಾರ್ಯಕ್ರಮ ‘ಅನ್ವೇಷಣಾ - 2018’ನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮುಖ್ಯ ಅತಿಥಿಗಳಾಗಿದ್ದ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಮಾತನಾಡಿ, ಇಂದು ಜೀವನದ ಎಲ್ಲಾ ರಂಗಗಳಿಗೂ ವೈಜ್ಞಾನಿಕ ಮನೋಭಾವವನ್ನು ಅನ್ವಯಿಸುವ ಅಗತ್ಯವಿದೆ. ಶಿಕ್ಷಣ ಇಲಾಖೆ ಈ ನಿಟ್ಟಿನಲ್ಲಿ ವಿಜ್ಞಾನಕ್ಕೆ ಒತ್ತು ನೀಡುವ ಕಾರ್ಯಕ್ರವುಗಳನ್ನು ಆಯೋಜಿಸುತ್ತಿದೆ ಎಂದರು.

ಶಿರ್ವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಸುಬ್ಬಯ್ಯ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಂಟಕಲ್ಲು ಮಧ್ವವಾದಿರಾಜ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರೊಫೆಸರ್ ರಾಜಶ್ರೀ ನಂಬಿಯಾರ್, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ಮಾತನಾಡಿದರು. ಕಾಲೇಜಿನ ಪ್ರಾಂಶು ಪಾಲ ಭಾಸ್ಕರ್ ಸ್ವಾಗತಿಸಿದರು. ಶಿಕ್ಷಕ ಕೇಶವ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶಕೀಲಾ ವಂದಿಸಿದರು. ಶಿಕ್ಷಕಿಯರಾದ ಸುಪ್ರಿತಾ ಮತ್ತು ವಸಂತಿ ಬಾಯಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ 28 ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಒಟ್ಟು 43 ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News