​ನ. 14ರಂದು ಅಮಿತ್ ಶಾ ಮಂಗಳೂರಿಗೆ

Update: 2018-11-13 17:02 GMT

ಮಂಗಳೂರು, ನ.13: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನ.14ರಂದು ಸಂಜೆ 4:30ಕ್ಕೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ.

ವಿಮಾನ ನಿಲ್ದಾಣದಿಂದ ನೇರವಾಗಿ ದಿ ಓಶಿಯನ್ ಪರ್ಲ್‌ ಹೊಟೇಲ್‌ಗೆ ತೆರಳಿ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಸಂಘನಿಕೇತನದಲ್ಲಿ ನಡೆಯುವ ಬೈಠಕ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಆನಂತರ ಮಂಗಳೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನ.15ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News