ನ.17-18: ಮತದಾರರ ಮಿಂಚಿನ ನೋಂದಣಿ ಅಭಿಯಾನ

Update: 2018-11-13 17:10 GMT

ಮಂಗಳೂರು, ನ.13: ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ನ.17 ಮತ್ತು 18ರಂದು ಮತದಾರರ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ನೋಂದಣಿ ಅಭಿಯಾನವು ಬೆಳಗ್ಗೆ 10ರಿಂದ ಸಂಜೆ 5:30 ರವರೆಗೆ ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ನಡೆಯಲಿದೆ. ಮತದಾರರ ಮಿಂಚಿನ ನೋಂದಣಿಗೆ ನ.20 ಕೊನೆಯ ದಿನವಾಗಿದ್ದು, ಸಾರ್ವಜನಿಕರು ಮತದಾರರ ಮಿಂಚಿನ ಅಭಿಯಾನದ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News