ಹನೂರು: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ
Update: 2018-11-13 22:59 IST
ಹನೂರು,ನ.13: ತಾಲೂಕಿನ ಕಳ್ಳಿದೂಡ್ಡಿ ಗ್ರಾಮದಲ್ಲಿ ಜೋಳದ ಫಸಲಿನ ಮಧ್ಯೆ ಬೆಳೆದಿದ್ದ ಗಾಂಜಾ ಗಿಡವನ್ನು ಹನೂರು ಪೋಲಿಸರು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕಳ್ಳಿದೂಡ್ಡಿ ಗ್ರಾಮದ ಶಿವರಾಮು ಬಂಧಿತ ಆರೋಪಿ. ಈತ ಗ್ರಾಮದ ಹೊರವಲಯದಲ್ಲಿರುವ ತನ್ನ ಜಮೀನಿನಲ್ಲಿ ಜೋಳದ ಫಸಲಿನ ಮಧ್ಯೆ ಅಕ್ರಮವಾಗಿ ಗಾಂಜಾವನ್ನು ಬೆಳೆದಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಎಸ್ಪಿ ಧರ್ಮೇಂದ್ರಕುಮಾರ್ ಮೀನಾ ಅವರ ಮಾರ್ಗದರ್ಶನದಲ್ಲಿ ಹನೂರು ಪೊಲೀಸರು ದಾಳಿ ನಡೆಸಿ 4.8 ಕೆಜಿ ತೂಕವುಳ್ಳ ಗಾಂಜಾ ಅನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಹನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.