ಪುತ್ತೂರು: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

Update: 2018-11-13 17:31 GMT

ಪುತ್ತೂರು, ನ. 13: ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ದೋರ್ಮೆ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಬಂಟ್ವಾಳ ತಾಲೂಕಿನ ಮಾಣಿ ಬುಡೋಳಿ ನಿವಾಸಿ ಸೇರ ಗಿರಿಯಪ್ಪ ಪೂಜಾರಿ ಎಂಬವ ಪುತ್ರ ಲಕ್ಷ್ಮಣ (28) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. 

ಲಕ್ಷ್ಮಣ ಅವರು ತನ್ನ ಬೈಕ್‍ನಲ್ಲಿ ಉಪ್ಪಿನಂಗಡಿಯಿಂದ ಬುಡೋಳಿಯಲ್ಲಿನ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ರಿಕ್ಷಾ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿತ್ತು. ಈ ಸಂದರ್ಭದಲ್ಲಿ ರಸ್ತೆಗೆಸೆಯಲ್ಪಟ್ಟ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾ ಗಿತ್ತು. ಅಲ್ಲಿ ಅವರು ಚಿಕತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. 

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News