ಬಾಲಕಿಗೆ ಕಿರುಕುಳ: ಆರೋಪಿ ಸೆರೆ
Update: 2018-11-13 23:07 IST
ಬಂಟ್ವಾಳ, ನ. 13: ಇಡ್ಕಿದು ಗ್ರಾಮದ ಬಾಲಕಿಯೋರ್ವಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಇಡ್ಕಿದು ಗ್ರಾಮದ ಕೋಲ್ಪೆ ನಿವಾಸಿ ಇಸಾಕ್ (31) ಬಂಧಿತ ಆರೋಪಿ.
ಈತ ನ. 11ರಂದು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ತಡೆದು ನಿಲ್ಲಿಸಿ, ಆಕೆಯ ಕೈ ಎಳೆದು ಲೈಂಗಿಕ ದೌರ್ಜನ್ಯ ಎಸೆಗಿದ್ದ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ಮನೆಯಲ್ಲಿ ವಿಚಾರ ತಿಳಿಸಿದ್ದು, ಸೋಮವಾರ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.
ವಿಟ್ಲ ಎಸ್ಸೈ ಯಲ್ಲಪ್ಪ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.