ಕೇರ್ ಚೈಲ್ಡ್ ಕ್ಯಾನ್ಸರ್ ವೆಬ್‌ಸೈಟ್ ಅನಾವರಣ

Update: 2018-11-14 09:12 GMT

ಮಂಗಳೂರು, ನ.14: ಸೆಂಟರ್ ಫಾರ್ ಡೆವಲಪ್‌ಮೆಂಟ್ ಸ್ಟಡೀಸ್ ಆ್ಯಂಡ್ ಎಜುಕೇಶನ್(ಸೆಡ್ಸ್) ವತಿಯಿಂದ ಕೇರ್ ಚೈಲ್ಡ್ ಕ್ಯಾನ್ಸರ್(ಸಿಸಿಸಿ) ವೆಬ್‌ಸೈಟ್ ಅನಾವರಣ ಕಾರ್ಯಕ್ರಮ ನಗರದ ರೋಶನಿ ನಿಲಯ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಜರುಗಿತು.

ಮಾಜಿ ಶಾಸಕ ಜೆ.ಆರ್.ಲೋಬೊ ವೆಬ್‌ಸೈಟ್ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ 18 ವರ್ಷಕ್ಕಿಂತ ಕೆಳಗಿನ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಪ್ರತೀ 100 ಪುರುಷರ ಪೈಕಿ ಎಂಟು ಪುರುಷರು ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂಬುದನ್ನು ಇತ್ತೀಚಿಗಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಇದಕ್ಕೆ ಪೂರಕವಾಗಿ ಮಂಗಳೂರಿನಲ್ಲಿ ಸೆಡ್ಸ್ ಸಂಸ್ಥೆ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ವೆಬ್ಸೈಟ್ ಸ್ಥಾಪಿಸಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭ ಸೆಡ್ಸ್ ಸಂಸ್ಥೆಯ ನಿರ್ದೇಶಕಿ ಡಾ.ರೀಟಾ ನೊರೊನ್ಹಾ, ಸೆಡ್ಸ್ ಸಿಸಿಸಿ ಮುಖ್ಯ ಸಂಯೋಜಕ ಹೆರಾಲ್ಡ್ ಮೊರಾಸ್, ರೋಶನಿ ನಿಲಯದ ಪ್ರಾಂಶುಪಾಲೆ ಡಾ.ಜೂಲಿಯೇಟ್ ಸಿ.ಜೆ. ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News