ಹಿರಿಯಡ್ಕ: ರಾಷ್ಟ್ರೀಯ ಏಕತಾ ದಿವಸ ಆಚರಣೆ
Update: 2018-11-14 20:31 IST
ಉಡುಪಿ, ನ.14: ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ರಾಘವೇಂದ್ರ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆಯನ್ನು ಬೋಧಿಸಿದರು. ಸಹಾಯಕ ಪ್ರಾಧ್ಯಾಪಕ ಸುಬಾಷ್ ಹೆಚ್.ಕೆ. ವಂದಿಸಿದರು. ಪ್ರವೀಣ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.