ಸಚಿವ ವೆಂಕಟರಮಣಪ್ಪ ಪತ್ನಿ ಶಾರದಮ್ಮ ನಿಧನ

Update: 2018-11-14 15:06 GMT

ಬೆಂಗಳೂರು, ನ. 14: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವರ ಪತ್ನಿ ಶಾರದಮ್ಮ(65) ಚಿಕಿತ್ಸೆ ಫಲಿಸದೆ ಇಂದು (ನ.14) ನಿಧನರಾಗಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾರದಮ್ಮ ಅವರು ಬುಧವಾರ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು ಸೇರಿದಂತೆ ಅಪಾರ ಸಂಖ್ಯೆಯ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಗುರುವಾರ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶಾರದಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪಡೆದರು. ಈ ವೇಳೆ ಸಚಿವ ವೆಂಕಟರಮಣಪ್ಪ ಮತ್ತವರ ಕುಟುಂಬದ ಸದಸ್ಯರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News