ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ

Update: 2018-11-14 16:02 GMT

ಉಡುಪಿ, ನ.14: ಕುತ್ಪಾಡಿ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯು ರ್ವೇದ ಕಾಲೇಜಿನ 2018-19ನೇ ಸಾಲಿನ ಆಯುರ್ವೇದ ಸ್ನಾತಕೋತ್ತರ ಅಧ್ಯಯನಕ್ಕೆ ಪ್ರವೇಶ ಪಡೆದ ಪ್ರಥಮ ವರ್ಷದ ಎಂ.ಡಿ./ಎಂ.ಎಸ್. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮವನ್ನು ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಜಿ.ಶ್ರೀನಿವಾಸ ಆಚಾರ್ಯ ವಹಿಸಿದ್ದರು. ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಮಮತಾ ಕೆ.ವಿ., ಸ್ನಾತಕೋತ್ತರ ಹಾಗೂ ಪಿಎಚ್‌ಡಿ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ.ನಿರಂಜನ್ ರಾವ್, ಉಪಮುಖ್ಯ್ಥ ಡಾ.ನಾಗರಾಜ್ ಉಪಸ್ಥಿತರಿದ್ದರು.

ಸಂಹಿತ ಸಿದ್ಧಾಂತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಲಿಖಿತಾ ಡಿ.ಎನ್. ಸ್ವಾಗತಿಸಿದರು. ದ್ರವ್ಯಗುಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ನಿವೇದಿತಾ ಶೆಟ್ಟಿ ವಂದಿಸಿದರು. ರೋಗನಿದಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಆವರಣ, ಫಾರ್ಮಸಿ, ಸಂಶೋಧನಾ ಕೇಂದ್ರದ ಪರಿಚಯವನ್ನು ಡಾ.ಚೈತ್ರಾ ಹೆಬ್ಬಾರ್, ಡಾ.ಅರ್ಪಣಾ ಜೈನ್, ಡಾ. ರಶ್ಮಿ ಎನ್.ಆರ್. ನೇತೃತ್ವದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ನೀಡ ಲಾಯಿತು. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ಡಾ.ಶ್ರೀಲತಾ ಕಾಮತ್ ನೇತೃತ್ವದಲ್ಲಿ ನಡೆಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News