ಕೃಷ್ಣರಾಜ ಸರಳಾಯರಿಗೆ ಸಹಕಾರ ರತ್ನ ಪ್ರಶಸ್ತಿ
Update: 2018-11-14 21:40 IST
ಉಡುಪಿ, ನ.14: ಮೈಸೂರು ವಿಭಾಗ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಕೆ. ಕೃಷ್ಣರಾಜ ಸರಳಾಯ ಆಯ್ಕೆಯಾಗಿದ್ದಾರೆ.
ಕೊರಂಗ್ರಪಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸ್ಥಾಪಕ ನಿರ್ದೇಶಕ ರಾಗಿ 30 ವರ್ಷ ಸೇವೆ ಸಲ್ಲಿಸಿದ್ದ ಇವರು, ಪಿಎಲ್‌ಡಿ ಬ್ಯಾಂಕ್, ದ.ಕ.ಜಿಲ್ಲಾ ಸಹಕಾರಿ ಸಂಘ, ರಾಜ್ಯ ಸಹಕಾರಿ ಪಟ್ಟಣ ಬ್ಯಾಂಕ್‌ಗಳ ಮಹಾಮಂಡಳ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಇವರು ಕಳೆದ 24 ವರ್ಷದಿಂದ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನ ಅಧ್ಯಕ್ಷರಾಗಿ, ನಿರ್ದೇಶಕ ರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ನ.15ರಂದು ಬೀದರ್‌ನಲ್ಲಿ ನಡೆಯುವ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಕಾರ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.