ನ.18ಕ್ಕೆ ಮೊದಲ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Update: 2018-11-14 16:51 GMT

ಬೆಂಗಳೂರು, ನ. 14: ಮೊದಲನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯನ್ನು ಬಿಎನ್‌ವೈಎಸ್ ವೈದ್ಯಕೀಯ ಪದವಿ ಪಡೆದ ಪದವೀಧರರ ಸಂಘ, ರಾಜ್ಯ ಸರಕಾರ ಹಾಗೂ ವಿವಿಧ ಸಂಸ್ಥೆಗಳು ನ.18ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಡಾ.ನವೀನ್ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಡಿಸಿಎಂ ಡಾ.ಜಿ.ಪರಮೇಶ್ವರ್, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಡೆ, ಅಂತರ್‌ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಫೆಡರೇಶನ್‌ನ ಪ್ರೊ.ಜಾನ್ ವಾರ್ಡ್ಲೆ ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News